ಬೆಂಗಳೂರು, ಫೆ 08 (DaijiworldNews/HR): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಸಲ್ಲಿಸಲಾಗಿರುವ ನಾಲ್ಕು ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿದ್ದು, ನಾವು ಸಂವಿಧಾನ ಏನು ಹೇಳುತ್ತದೋ ಅದರಂತೆ ನಡೆಯುತ್ತೇವೆ. ಭಗದ್ಗೀತೆಗಿಂತ ಸಂವಿಧಾನವೇ ಮೇಲು ಎಂದು ಹೇಳಿದ್ದಾರೆ.
ಹಿಜಾಬ್ ಪರ ವಾದ ಮಂಡನೆ ಮಾಡಿದ ಹಿರಿಯ ದೇವದತ್ತ ಕಾಮತ್ ಅವರು, ಸ್ಕಾರ್ಫ್ ಧರಿಸುವುದು ಇಸ್ಲಾಮಿಕ್ ಧರ್ಮದ ಭಾಗವಾಗಿದ್ದು, ಮದ್ರಾಸ್, ಬಾಂಬೆ ಮತ್ತು ಕೇರಳ ಕೋರ್ಟ್ಗಳು ಇಂಥಹ ಸಮಸ್ಯೆಯನ್ನು ನಿಭಾಯಿಸುವುದಿಲ್ಲ. ಹಿಜಾಬ್ ಧರಿಸುವುದು ಸಂವಿಧಾನ ಆರ್ಟಿಕಲ್ 19(1)(ಎ) ಮತ್ತು ಆರ್ಟಿಕಲ್ 19(6) ಅಡಿಯಲ್ಲಿ ಬರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನಿಂದ ರಕ್ಷಿಸಲ್ಪಟ್ಟಿದೆ. ಹಿಜಾಬ್ ಧರಿಸುವುದು ಖಾಸಗಿತನದ ಹಕ್ಕಿಗೆ ಸಂಬಂಧಿಸಿದ ಅಂಶವಾಗಿದೆ. ಇದನ್ನು ಸಂವಿಧಾನ 21ನೇ ವಿಧಿಯಲ್ಲಿ ಈ ಮೂಲಕ ಖಾಸಗಿತನವನ್ನು ಉಲ್ಲೇಖಿಸಲಾಗಿದೆ ಎಂದಿದ್ದಾರೆ.
ಇನ್ನು ನಾವು ಬುರ್ಖಾ ಬಗ್ಗೆ ಮಾತನಾಡುತ್ತಿಲ್ಲ. ಹಿಜಾಬ್ ಧರಿಸೋದು ಮೂಲಭೂತ ಹಕ್ಕು. ಹಿಜಾಬ್ ಧರಿಸೋದು ಖಾಸಗೀತನದ ಹಕ್ಕು ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಸರ್ಕಾರ ಆದೇಶ ವ್ಯಾಪ್ತಿಗೆ ಮೀರಿದ್ದು. ವಸ್ತ್ರ ಸಂಹಿತೆ ಸಂಬಂಧ ಸರ್ಕಾರ ಸ್ಪಷ್ಟವಾದ ಆದೇಶವನ್ನು ನೀಡಿಲ್ಲ. ಇಲ್ಲಿಯವರೆಗೆ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯ ವ್ಯಕ್ತಪಡಿಸಿದೆ.
ಇದೇ ವೇಳೆ ನ್ಯಾಯಾಧೀಶರು ಖುರಾನ್ ಪ್ರತಿಯನ್ನು ತರಿಸಿಕೊಂಡು ಗಮನಿಸಿದರು. ಖುರಾನ್ ನಲ್ಲಿ ಮಹಿಳೆಯರು ಧರಿಸಿರುವ ಉಡುಪಿನ ಬಗ್ಗೆ ಮಾಹಿತಿ ಪಡೆದುಕೊಂಡರು. ಖುರಾನ್ ನಲ್ಲಿಯೇ ಎಲ್ಲವೂ ಮೂಲಭೂತ ಆಚರಣೆಗಳೇನಾ? ಇವುಗಳ ವ್ಯಾಪ್ತಿ ಏನು? ಹಿಜಾಬ್ ಬಗ್ಗೆ ಖುರಾನ್ ನಲ್ಲಿರುವ ಮಾಹಿತಿ ಓದಿ ಎಂದು ವಕೀಲರಿಗೆ ಸೂಚಿಸಿದರು.
ಇನ್ನು ವಾದಗಳ ಆಲಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ ಎಮ್ದು ತಿಳಿದು ಬಂದಿದೆ.