ಬೆಂಗಳೂರು, ಫೆ 08 (DaijiworldNews/HR): ರಾಜ್ಯದ ಅನೇಕ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದ ಜಿಲ್ಲೆಗಳಲ್ಲಿ ರಜೆಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ನಡೆಯುತ್ತಿರುವುದರಿಂದ ಮಕ್ಕಳು ಆತಂಕಕ್ಕೆ ಒಳಗಾಗುತ್ತಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದ ಜಿಲ್ಲೆಗಳಲ್ಲಿ ರಜೆಗೆ ಸೂಚನೆ ನೀಡಲಾಗಿದೆ. ತೊಂದರೆಯಾದ ಜಿಲ್ಲೆಗಳಲ್ಲಿ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಇನ್ನು ರಾಜ್ಯದ 12 ಕಾಲೇಜುಗಳಲ್ಲಿ ಸಂಘರ್ಷ ನಡೆಯುತ್ತಿದ್ದು, ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದರೆ ಖಂಡನೀಯ. ಅಧಿಕಾರಿಗಳಿಂದ ವರದಿ ತರಿಸಿಕೊಂಡು ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ.