ಬೆಂಗಳೂರು, ಫೆ 08 (DaijiworldNews/HR): ರಾಜ್ಯಾದ್ಯಾಂತ ಸದ್ದು ಮಾಡುತ್ತಿರುವ ಹಿಜಾಬ್ ವಿವಾದದ ಕುರಿತು ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಇಂದು ಸರ್ಕಾರದ ಪರ ವಕೀಲರ ಹಾಗೂ ಅರ್ಜಿದಾರರ ಪರ ವಕೀಲರ ಎರಡೂ ಕಡೆ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾ.ಕೃಷ್ಣ ದೀಕ್ಷಿತ್ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2:30ಕ್ಕೆ ಮುಂದೂಡಿದ್ದಾರೆ.
ಇನ್ನು ಹಿಜಾಬ್ ವಿಚಾರವಾಗಿ ರಾಜ್ಯದ ಹಲವು ಶಿಕ್ಷಣ ಸಂಸ್ಥೆಗಳಲ್ಲಿ, ಕಾಲೇಜುಗಳಲ್ಲಿ ಗಲಾಟೆ, ಪ್ರತಿಭಟನೆಗಳು ನಡೆಯುತ್ತಿದ್ದು, ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ.