ಬೆಂಗಳೂರು, ಫೆ. 08 (DaijiworldNews/SM): ರಾಜ್ಯದಲ್ಲಿ ಹಿಜಾಬ್ ವಿವಾದ ದಿನಕ್ಕೊಂದು ತಿರುವುಪಡೆದುಕೊಳ್ಳುತ್ತಿದೆ. ಈ ನಡುವೆ ಹಿಜಾಬ್ ಧರಿಸುವುದಕ್ಕೆ ಅವಕಾಶ ಕಲ್ಪಿಸಬೇಕೆಂದು ಕೆಲವು ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಮಂಗಳವಾರ ವಾದ ಪ್ರತಿವಾದ ಆಲಿಸಲಾಗಿದ್ದು, ಬುಧವಾರಕ್ಕೆ ಮುಂದೂಡಲಾಗಿದೆ. ಈ ನಡುವೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಕೋರ್ಟ್ ಮನವಿ ಮಾಡಿಕೊಂಡಿದೆ.
ಸದ್ಯ ವಿವಾದದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ವಿದ್ಯಾರ್ಥಿ ಸಮುದಾಯ ಮತ್ತು ಸಾರ್ವಜನಿಕರು ಶಾಂತಿ ಕಾಪಾಡಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಹಕಾರವನ್ನು ನೀಡಬೇಕು ಎಂದು ಉಲ್ಲೇಖಿಸಿದೆ. ಸಾರ್ವಜನಿಕ ವಲಯದಲ್ಲಿರುವ ತಾಳ್ಮೆಯ ಸ್ವಭಾವ ಹಾಗೂ ಸಹನೆಯನ್ನು ಸಂಪೂರ್ಣವಾಗಿ ಕೋರ್ಟ್ ನಂಬಿಕೆ ಇರಿಸಿಕೊಂಡಿದೆ. ಅದರೆ, ಜನರು ಉಳಿಸುತ್ತಾರೆ ಎಂದು ಕೋರ್ಟ್ ಉಲ್ಲೇಖಿಸಿದೆ.
ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಏಕಸದಸ್ಯ ಪೀಠ ಕೈಗೆತ್ತಿಕೊಂಡಿತ್ತು. ಸರಕಾರದ ಪರವಾಗಿ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ವಾದಿಸಿದರೆ, ಹಿಜಾಬ್ ಧರಿಸಲು ಅವಕಾಶ ಕಲ್ಪಿಸುವಂತೆ ಕೋರಿರುವ ಅರ್ಜಿದಾರರ ಪರ ದೇವದತ್ ಕಾಮತ್ ವಾದ ಮಂಡಿಸಿದ್ದರು.