ಅಲಹಬಾದ್, ಫೆ 10 (DaijiworldNews/MS): ಲಿಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ಆರೋಪಿ ಬಿಜೆಪಿ ನಾಯಕ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಇಂದು ಜಾಮೀನು ನೀಡಿದೆ.
ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಕಾರು ಹರಿಸಿರುವ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದಲ್ಲಿ ರೈತರು ಸೇರಿದಂತೆ ಒಟ್ಟು 9 ಜನ ಮೃತಪಟ್ಟಿದ್ದರು. ಕಳೆದ ವರ್ಷ ಅಕ್ಟೋಬರ್ 3ರಂದು ಈ ಘಟನೆ ನಡೆದಿತ್ತು. ಈ ಘಟನೆಯ ವಿರುದ್ದ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿ ಆರೋಪಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಒತ್ತಾಯ ಕೇಳಿಬಂದಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿತ್ತು.
ಈ ಪ್ರಕರಣ ಸಂಬಂಧ ಮಿಶ್ರಾ ಅಲಹಾಬಾದ್ ಹೈಕೋರ್ಟ್ ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದಂತ ನ್ಯಾಯಪೀಠವು, ಇಂದು ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ, ಅಶಿಶ್ ಮಿಶ್ರಾಗೆ ಜಾಮೀನು ಮಂಜೂರು ಮಾಡಿದೆ