ಬೆಂಗಳೂರು, ಫೆ 11 (DaijiworldNews/HR): ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ಮುಂದುವರೆದಿದ್ದು, ಸುಪ್ರೀಂ ಕೋರ್ಟ್ಗೆ ಹೋಗುವವರು ಹೋಗಲಿ. ನಮ್ಮದೇನು ಅಭ್ಯಂತರ ಇಲ್ಲ. ಕೋರ್ಟ್ ಏನು ತೀರ್ಮಾನ ಮಾಡುತ್ತದೋ ಕಾದು ನೋಡೋಣ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಯರ್ಗಳನ್ನು ಇಟ್ಟು ಕೋರ್ಟ್ನಲ್ಲಿ ವಾದ ಮಾಡುವ ಶಕ್ತಿ ನನಗಂತೂ ಇಲ್ಲ, ಕಾಲೇಜಿನ ಆ ವಿದ್ಯಾರ್ಥಿನಿಯರಿಗೂ ಆ ಶಕ್ತಿ ಇರಲ್ಲ. ಆದರೆ ಯಾರೋ ಈ ವಿದ್ಯಾರ್ಥಿನಿಯರ ಹಿಂದೆ ಇದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಇಡೀ ಹಿಜಾಬ್ ವಿವಾದ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಅನ್ನಿಸುತ್ತಿದ್ದು, ಸುಪ್ರೀಂ ಕೋರ್ಟ್ಗೆ ಹೋಗುವವರು ಹೋಗಲಿ, ನಮ್ಮದೇನು ಅಭ್ಯಂತರ ಇಲ್ಲ. ಕೋರ್ಟ್ ಏನು ತೀರ್ಮಾನ ಮಾಡುತ್ತದೋ ನೋಡೋಣ. ಸರ್ಕಾರದ ಆದೇಶ ಪಾಲನೆ ಮಾಡಿದರೆ ಮಾತ್ರ ಕಾಲೇಜಿಗೆ ಪ್ರವೇಶ ಎಂದು ಸ್ಪಷ್ಟಪಡಿಸಿದ್ದಾರೆ.