ನವದೆಹಲಿ, ಫೆ 11 (DaijiworldNews/KP): ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ವಿವಾದಗಳಿಗೆ ಬಿಜೆಪಿಯು ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿನ ಎಲ್ಲಾ ಬೆಳವಣಿಗೆಗಳಿಗೆ ಸರ್ಕಾರ ಅವರಲ್ಲೂ ಮುಖ್ಯವಾಗಿ ಬಿಜೆಪಿ ಸದಸ್ಯರೇ ಕಾರಣ, ಮುಂಬರುವ ಚುನಾವಣೆಯನ್ನು ಗುರಿಯಾಗಿಸಿಕೊಂಡು ರಾಜಕೀಯ ಲಾಭ ಪಡೆಯಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಸದ್ಯ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ, ರಾಜಕೀಯ ಪಕ್ಷಗಳ ಮುಖಂಡರು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ನಿರತರಾಗಿದ್ದಾರೆ.