ಬೆಂಗಳೂರು, ಫೆ 11 (DaijiworldNews/HR): ರಾಜ್ಯದಲ್ಲಿ ಸದ್ದು ಮಾಡಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಿಂದ ಬಂದ್ ಆಗಿದ್ದ ಹೈಸ್ಕೂಲು, ಕಾಲೇಜು ಆರಂಭಕ್ಕೆ ಸರ್ಕಾರ ಮುಂದಾಗಿದ್ದು, ಪೊಲಿಸ್ ಭದ್ರತೆಯಲ್ಲಿ ಶಾಲಾಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಚಿವರು, ಸೋಮವಾರದಿಂದ 9, 10ನೇ ತರಗತಿಗಳು ಆರಂಭವಾಗಲಿದ್ದು, ಹಂತ ಹಂತವಾಗಿ ಶಾಲಾ-ಕಾಲೇಜು ಆರಂಭಕ್ಕೆ ನಿರ್ಧರಿಸಲಾಗಿದೆ ಎಂದರು.
ಇನ್ನು ರಾಜ್ಯಾದ್ಯಂತ ಮುಂಜಾಗೃತಾ ಕ್ರಮವಾಗಿ ಪೊಲೀಸರಿಗೆ ಫುಲ್ ಅಲರ್ಟ್ ಆಗಿರುವಂತೆ ಸೂಚಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವಂತೆ ತಿಳಿಸಲಾಗಿದೆ ಎಂದರು.
ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳ ಶಾಲೆಗಳ ಗುರುತು ಮಾಡಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.