ನವದೆಹಲಿ, ಫೆ 12 (DaijiworldNews/HR): ಕೇರಳ, ಪಶ್ಚಿಮ ಬಂಗಾಳ ಅಥವಾ ಕಾಶ್ಮೀರದಂತೆ ಉತ್ತರ ಪ್ರದೇಶವು ಆಗುವುದು ಬೇಡ ಎಂದಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದನ್ನು ಖಂಡಿಸಿ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿದೆ ಎಂದು ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ
ಕಲಾಪ ಆರಂಭವಾಗುತ್ತಿದ್ದಂತೆಯೇ ಶುಕ್ರವಾರ ಕಾಂಗ್ರೆಸ್, ಟಿಎಂಸಿ, ನ್ಯಾಷನಲ್ ಕಾನ್ಫರೆನ್ಸ್ ಸಂಸದರು ಸ್ಪೀಕರ್ ಪೀಠದ ಮುಂದೆ ಪ್ರತಿಭಟನೆ ನಡೆಸಿದ್ದು, ಆದಿತ್ಯನಾಥ ಹೇಳಿಕೆಯನ್ನು ಖಂಡಿಸಿ ಕೇರಳ ಕಾಂಗ್ರೆಸ್ ಸಂಸದರು ನಿರ್ಣಯವನ್ನೂ ಮಂಡಿಸಿದ್ದಾರೆ.
ಇನ್ನು ಪ್ರಶ್ನಾ ವೇಳೆಯ ಬಳಿಕ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲಾಗುವುದು ಎಂದು ಸ್ಪೀಕರ್ ಓಂ ಬಿರ್ಲಾ ಭರವಸೆ ಕೊಟ್ಟಿದ್ದು, ಸದಸ್ಯರು ತಮ್ಮ ತಮ್ಮ ಆಸನಗಳಿಗೆ ತೆರಳುವಂತೆ ಮನವಿ ಮಾಡಿದರು. ಆದರೆ, ಕಾಂಗ್ರೆಸ್, ಟಿಎಂಸಿ, ಕೇರಳ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಡಿಎಂಕೆ ಮತ್ತು ಎಸ್ಪಿ ಸಂಸದರು ಸಭಾತ್ಯಾಗ ಮಾಡಿದ್ದಾರೆ.