ಸೊಪೋರ್, ಫೆ 12 (DaijiworldNews/KP): ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಜಿಲ್ಲೆಯ ಡಾಂಗಿವಾಚಾ ಪ್ರದೇಶದಲ್ಲಿ ಅಲ್ ಬದರ್ ಉಗ್ರ ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಇಂದು ಪೊಲೀಸರು ಬಂಧಿಸಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಖಚಿತ ಮಾಹಿತಿ ಮೇರೆಗೆ ಡಾಂಗಿವಾಚಾ ಪ್ರದೇಶದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಮೂವರು ಉಗ್ರರನ್ನು ಬಂಧಿಸಿದ್ದಾರೆ.
ಇನ್ನು ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರ ಹಾಗೂ ಗಡಿ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿ, ನಾಲ್ವರಿಗೆ ಗಾಯಗಳಾಗಿತ್ತು.
ಬಂಧಿತ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಪೋಟಕಗಳನ್ನು ವಶ ಪಡೆಸಿಕೊಂಡಿದ್ದಾರೆ, ಹಾಗೂ ಉಗ್ರರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.