ಭೋಪಾಲ್, ಫೆ 13 (DaijiworldNews/HR): ಬಾರ್ಗಿ ಕಾಲುವೆ ಯೋಜನೆಯ ನಿರ್ಮಾಣ ಹಂತದ ಸುರಂಗದಲ್ಲಿ ಒಂಬತ್ತು ಕಾರ್ಮಿಕರು ಸಿಕ್ಕಿಬಿದ್ದಿದ್ದು, ಕಾರ್ಯಾಚರಣೆಗಳು ನಡೆಸಿ ಏಳು ಮಂದಿಯನ್ನು ರಕ್ಷಿಸಿರುವ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲೀಮನಾಬಾದ್ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಶನಿವಾರ ತಡರಾತ್ರಿ ನಡೆದಿದ್ದು, ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ ತಂಡದೊಂದಿಗೆ ಸ್ಥಳೀಯ ಅಧಿಕಾರಿಗಳು ಉಳಿದ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲು ಪ್ರಯತ್ನಿಸುತ್ತಿದ್ದು, ಎಸ್ಡಿಇಆರ್ಎಫ್ ತಂಡ ಜಬಲ್ಪುರದಿಂದ ಆಗಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮಧ್ಯಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೇಶ್ ರಾಜೋರಾ ಅವರು ರಾಜ್ಯ ಸಚಿವಾಲಯದಿಂದ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ.