ದಾವಣಗೆರೆ, ಫೆ 13 (DaijiworldNews/KP): ಬಿಜೆಪಿಯವರಿಗೆ ರಾಮಮಂದಿರ ಆಯಿತು, ಗೋಹತ್ಯೆ ನಿಷೇಧವಾಯಿತು. ಇದೀಗ ಹಿಜಾಬ್ ವಿವಾದ ಕೈಗೆತ್ತಿಕೊಂಡಿದ್ದಾರೆ. ಆದರೆ ಬಿಜೆಪಿಯವರಿಗೆ ಹಿಜಾಬ್ ಎಂದರೆ ಅರ್ಥವೇ ಗೊತ್ತಿಲ್ಲ ಎಂದು ಎಂಎಲ್ಸಿ ಸಿ.ಎಂ. ಇಬ್ರಾಹಿಂ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ರಾಮಮಂದಿರ ಆಯಿತು, ಗೋಹತ್ಯೆ ನಿಷೇಧವಾಯಿತು. ಇದೀಗ ಹಿಜಾಬ್ ವಿವಾದ ಕೈಗೆತ್ತಿಕೊಂಡಿದ್ದಾರೆ. ಆದರೆ ಬಿಜೆಪಿಯವರಿಗೆ ಹಿಜಾಬ್ ಅಂದರೆ ಅರ್ಥವೇ ಗೊತ್ತಿಲ್ಲ, ವಿದ್ಯಾರ್ಥಿಗಳು ಹೆಗಲ ಮೇಲೆ ವೇಲ್ ಹಾಕಿಕೊಳ್ಳುತ್ತಾರೆ. ಅದೇ ವೇಲ್ ಅನ್ನು ತಲೆ ಮೇಲೆ ಹಾಕಿಕೊಂಡರೆ ಏನು ತಪ್ಪು? ಎಂದು ಪ್ರಶ್ನಿಸಿದ್ದಾರೆ.
ಇನ್ನು ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಕಥೆ ಮುಗಿದಿದೆ. ಅದನ್ನ ಸುಡಬೇಕೋ, ಹೂಳಬೇಕೋ ಎಂಬ ಪ್ರಶ್ನೆಯು ಮೂಡಿದ್ದು ಬಸವಕೃಪ ಅಂದರೆ ಹೂಳಬೇಕಾಗುತ್ತೆ. ಕೇಶವಕೃಪ ಅಂದರೆ ಸುಡಬೇಕಾದ ಸ್ಥಿತಿ ಬಂದೊದಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸಿಎಂ ಬೊಮ್ಮಾಯಿ ಸರ್ಕಾರ ಪಂಕ್ಚರ್ ಆಗಿರುವ ಬಸ್ ಇದ್ದ ಹಾಗೆ, ಅದು ಯಾವಾಗ ಏನಾಗುತ್ತೆ ಎಂಬುದು ಗೊತ್ತಿಲ್ಲ. ಕೆಲವು ದಿನಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಬಂದರು ಆರ್ಶ್ವಯವಿಲ್ಲ ಎಂದು ಅವರು ಹೇಳಿದ್ದಾರೆ.