ಗದಗ, ಫೆ 13 (DaijiworldNews/HR): ಹಿಜಾಬ್ ವಿಚಾರದಲ್ಲಿ ಎಲ್ಲರಿಗೂ ಮಾತನಾಡಬೇಡಿ ಎಂದು ಹೇಳಿದ್ದೆವು, ಆದ್ರೆ ನಾನು ಮಾತನಾಡುತ್ತೇನೆ. ಅಲ್ಪಸಂಖ್ಯಾತರನ್ನು ನಾವು ಮೊದಲಿನಿಂದಲೂ ರಕ್ಷಣೆ ಮಾಡಿಕೊಂಡು ಬಂದಿದ್ದೇವೆ. ಮುಂದೆಯೂ ರಕ್ಷಣೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಗಮನದಲ್ಲಿಟ್ಟುಕೊಂಡು ಮೇಕೆದಾಟು ಹೋರಾಟ ಮಾಡಿಲ್ಲ. ಬಿಜೆಪಿಯವರು ನುಡಿದಂತೆ ನಡೆಯುತ್ತಿಲ್ಲಾ. ಮೇಕೆದಾಟು ಹೋರಾಟ ತಡೆಯಲು ಏನೆಲ್ಲಾ ತೊಂದರೆ ಮಾಡಿದ್ದರು. ಕೋರ್ಟ್ ಹೋದರು, ಹೋರಾಟ ನಿಲ್ಲಿಸಲು ಪ್ರಯತ್ನ ಮಾಡಿದರು. ಸದ್ಯದಲ್ಲಿ ಮೇಕೆದಾಟು ಹೋರಾಟ ಆರಂಭ ಮಾಡುತ್ತೇವೆ ಎಂದರು.
ಇನ್ನು ಉತ್ತರ ಕರ್ನಾಟಕ, ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಅನೇಕ ಸಮಸ್ಯೆ ಇವೆ. ನಾವು ಯಾವುದೇ ಕಾರ್ಯಕ್ರಮ ಮಾಡಬಾರದು ಎನ್ನುವುದು ಸರ್ಕಾರದ ಉದ್ದೇಶ. ಅದನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಮಾಡುತ್ತೇವೆ. ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.