ಬೆಂಗಳೂರು, ಫೆ.14 (DaijiworldNews/HR): ಆನ್ಲೈನ್ ಗೇಮ್ ನಿಷೇಧ ಹೇರಿದಂತ ರಾಜ್ಯ ಸರ್ಕಾರದ ಆದೇಶವನ್ನ ಇಂದು ಹೈಕೋರ್ಟ್ ರದ್ದು ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಹಣವನ್ನು ಪಣವಾಗಿ ಕಟ್ಟುವ ಆನ್ಲೈನ್ ಗೇಮ್ ಸೇರಿದಂತೆ ಎಲ್ಲಾ ಜೂಜಾಟವನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸುವ ಕರ್ನಾಟಕದ ಪೊಲೀಸ್ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದರು.
ಇನ್ನು ಈ ಕಾಯ್ದೆಯು ಎರಡು ಸದನದಲ್ಲಿ ಬಹುಮತದೊಂದಿಗೆ ಅನುಮೋದನೆಯನ್ನು ಪಡೆದುಕೊಂಡಿದ್ದು, ಈ ನಡುವೆ ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ಬ್ಯಾನ್ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಕಂಪನಿಗಳು ರಿಟ್ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠದಿಂದ ಸರ್ಕಾರದ ಆದೇಶವನ್ನು ರದ್ದು ಮಾಡಿದೆ.
ರಾಜ್ಯದಲ್ಲಿ ಮತ್ತೆ ಆನ್ಲೈನ್ ಗೇಮಿಂಗ್ ಕಾಣಬಹುದಾಗಿದ್ದು, ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ರ ಪೀಠ ಆನ್ಲೈನ್ ಗೇಮ್ಗೆ ಗ್ರೀನ್ ಸಿಗ್ನಲ್ ನೀಡಿದೆ