ಹೈದರಾಬಾದ್, ಫೆ 14 (DaijiworldNews/KP): 2016ರಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಪುರಾವೆ ಕೇಳುವುದರಲ್ಲಿ ತಪ್ಪೇನಿಲ್ಲ, ನಾನು ಇಂದಿಗೂ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ಕೇಳುತ್ತಿದ್ದೇನೆ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.
ಹೈದರಾಬಾದ್ನ ಪ್ರಗತಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಜಿಕಲ್ ಸ್ಟ್ರೈಕ್ ಪುರಾವೆ ಕೇಳುವುದರಲ್ಲಿ ತಪ್ಪೇನಿಲ್ಲ, ನಾನು ಇಂದಿಗೂ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ಕೇಳುತ್ತಿದ್ದೇನೆ, 2016ರಲ್ಲಿ ನಡೆದ ಉರಿ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ಥಾನದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದು, ಅದರ ಸಂಪೂರ್ಣ ಕೀರ್ತಿ ಸೇನೆಗೆ ಸಲ್ಲುತ್ತದೆ ಹೊರತು ಬಿಜೆಪಿಗಲ್ಲ ಎಂದು ಹೇಳಿದ್ದಾರೆ.
ಇನ್ನು ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಕ್ಕಾಗಿ ಧರ್ಮ ಮತ್ತು ಸೇನೆಯ ಉಲ್ಲೇಖ ಮಾಡುತ್ತಿದೆ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿಯವರೆಗೂ ಬಿಜೆಪಿ ಮತದಾರರನ್ನು ಒಲಿಸಿಕೊಳ್ಳುವುದಕ್ಕಾಗಿ ಸರ್ಜಿಕಲ್ ಸ್ಟ್ರೈಕ್ಗಳನ್ನು ಅಸ್ತ್ರವಾಗಿ ಬಳಸುತಿತ್ತು, ಆದರೆ ಈಗ ಜನರಲ್ ಬಿಪಿನ್ ರಾವತ್ ಫೋಟೋಗಳನ್ನು ಬಳಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.