ಬೆಂಗಳೂರು, ಫೆ.14 (DaijiworldNews/HR): ಇಂದಿನಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭಗೊಂಡಿದ್ದು, ಅಧಿವೇಶನದ ಮೊದಲ ದಿನವೇ ಕಾಂಗ್ರೆಸ್ ಶಾಸಕರು ಕಪ್ಪು ಪಟ್ಟಿ ಧರಿಸಿ ಕಲಾಪದಲ್ಲಿ ಪಾಲ್ಗೊಂಡಿದ್ದಾರೆ.
ಈ ಕೂಡಲೇ ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಿ ಶಾಲೆಗೆ ಬರಲು ಅವಕಾಶ ಮಾಡಿಕೊಡ. ಹಿಜಾಬ್ ವಿಷಯ ಮುಂದಿಟ್ಟುಕೊಂಡು ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು ಎಂದು ಆಗ್ರಹಿಸಿ ಕಾಂಗ್ರೆಸ್ ಶಾಸಕರು ಆಗ್ರಹಿಸುತ್ತಾ ಕಪ್ಪುಪಟ್ಟಿ ಧರಿಸಿ ಸಾಂಕೇತಿ ಪ್ರತಿಭಟನೆ ನಡೆಸಿ ಕಲಾಪದಲ್ಲಿ ಪಾಲ್ಗೊಂಡಿದ್ದಾರೆ.
ಇನ್ನು ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜ ಫಾತಿಮಾ ಹಿಜಾಬ್ ಧರಿಸಿಕೊಂಡೇ ಕಲಾಪದಲ್ಲಿ ಪಾಲ್ಗೊಂಡಿದ್ದಾರೆ.
ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್ ನ ವಿಸ್ತೃತ ಪೀಠದಲ್ಲಿ ಇಂದು 2.30ಕ್ಕೆ ವಿಚಾರಣೆ ನಡೆಯಲಿದ್ದು, ತೀರ್ಪು ಯಾವ ರೀತಿ ಹೊರಬರಲಿದೆ ಎಂಬ ಕುತೂಹಲದಲ್ಲಿ ಇಡೀ ರಾಜ್ಯ ಕಾದು ಕುಳಿತಿದೆ.