ಕೋಲ್ಕತ್ತಾ, ಫೆ 14 (DaijiworldNews/MS): "ಕಾಂಗ್ರೆಸ್ ತನ್ನ ದಾರಿಯಲ್ಲಿ ಹೋಗಬಹುದು, ನಾವು ನಮ್ಮ ದಾರಿಯಲ್ಲಿ ಹೋಗುತ್ತೇವೆ" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಪಕ್ಷದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳದ ನಾಲ್ಕು ಪುರಸಭೆ ಕಾರ್ಪೊರೇಷನ್ ಗಳಲ್ಲಿ ಫೆ.12 ರಂದು ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷದ ಪರ ಒಲವು ತೋರಿರುವ ಜನತೆಗೆ ಸಿಎಂ ಮಮತಾ ಬ್ಯಾನರ್ಜಿ ಧನ್ಯವಾದ ತಿಳಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಾ.03 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ವಾರಣಾಸಿಯಲ್ಲಿ ರ್ಯಾಲಿ ನಡೆಸುವುದಾಗಿ ಹೇಳಿದ್ದಾರೆ.
ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಹಿನ್ನಡೆಯನ್ನು ನಾನು ಬಯಸದ ಕಾರಣ ಟಿಎಂಸಿಯೂ ಉತ್ತರಪ್ರದೇಶದಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ.ಮೊದಲ ಹಂತದಲ್ಲಿ, ಅಖಿಲೇಶ್ ಅವರ ಪಕ್ಷವು 57 ಸ್ಥಾನಗಳಲ್ಲಿ 37 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಪ್ರಾದೇಶಿಕ ಪಕ್ಷಗಳೂ ಮೈತ್ರಿ ಹಾಗೂ ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿಲ್ಲ. ಕಾಂಗ್ರೆಸ್ ದಾರಿ ಕಾಂಗ್ರೆಸ್ ಗೆ, ನಮ್ಮ ದಾರಿ ನಮಗೆ
ನಾನು ಕಾಂಗ್ರೆಸ್ ಮತ್ತು ಸಿಪಿಐ(ಎಂ) ಕೂಡ ಹೆಚ್ಚಿನ ಆಸಕ್ತಿಯಿಂದ ಕೈಜೋಡಿಸುವಂತೆ ಕೇಳಿಕೊಂಡಿದ್ದೇನೆ, ಆದರೆ ಅವರು ಕೇಳದಿದ್ದರೆ ನಾನೇನೂ ಮಾಡಲು ಸಾಧ್ಯವಿಲ್ಲ. ನನಗೆ ಯಾರ ವಿರುದ್ಧವೂ ಯಾವುದೇ ವೈಯಕ್ತಿಕ ದ್ವೇಷವಿಲ್ಲ ಎಂದು ಇದೇ ವೇಳೆ ಹೇಳಿದ್ದಾರೆ.