ಬೆಂಗಳೂರು, ಫೆ.14 (DaijiworldNews/HR): ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರ ಧ್ವಜದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ ರಾಷ್ಟ್ರದ್ರೋಹದ ಆರೋಪದಡಿ ಪ್ರಕರಣ ದಾಖಲಿಸಬೇಕು ಎಂದು ವಿಧಾನಪರಿಷತ್ನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರ ಹೇಳಿಕೆ ರಾಷ್ಟ್ರದ್ರೋಹವಾಗಿದ್ದು, ಈ ಹಿಂದೆ ರೈತ ಚಳವಳಿಯ ವೇಳೆ ಕೆಂಪುಕೋಟೆಯ ಮೇಲೆ ರೈತ ಧ್ವಜ ಹಾರಿಸಿದವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಲಾಗಿತ್ತು. ಈಶ್ವರಪ್ಪ ಕೂಡ ಕೆಂಪು ಕೋಟೆ ಮೇಲೆ ಭಗಧ್ವಜ ಹಾರಿಸುವ ಪ್ರಸ್ತಾಪ ಮಾಡಿದ್ದು ಅವರ ವಿರುದ್ಧ ಕೂಡ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಹಿಜಾಬ್ ವಿವಾರದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಹಕ್ಕುಗಳನ್ನು ಧಮನಿಸುತ್ತಿದೆ. ಇದನ್ನು ವಿರೋಸಿ ನಾವು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.