ಬೆಂಗಳೂರು, ಫೆ 14 (DaijiworldNews/MS): ಬುರ್ಖಾ ಪದ್ಧತಿ ಇಲ್ಲದ ಕಾರಣವೇ ಭಾರತದಲ್ಲಿ ಅತ್ಯಾಚಾರಗಳು ಹೆಚ್ಚಾಗುತ್ತಿವೆ ಎಂದು ಹಿಜಬ್ ವಿವಾದದ ಬಗ್ಗೆ ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದು, ಈ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬುರ್ಖಾ ಪದ್ಧತಿ ಇಲ್ಲದೆ ಭಾರತದಲ್ಲಿ ಅತ್ಯಾಚಾರಗಳು ಹೆಚ್ಚಾಗುತ್ತಿವೆ ಯುವತಿಯರ ಸೌಂದರ್ಯ ರಕ್ಷಣೆಗೆ ಬುರ್ಖಾ, ಹಿಜಬ್ ಪದ್ಧತಿ ಇದೆ ಎಂದು ವಿವಾದಾತ್ಮಕ ಹೇಳಿಕೆಯನ್ನು ಶಾಸಕ ಜಮೀರ್ ಹೇಳಿದ್ದರು.
ಆದರೆ ಜಮೀರ್ ಹೇಳಿಕೆಗೆ ಸ್ವಪಕ್ಷೀಯರು ಅಸಮಧಾನ ವ್ಯಕ್ತಪಡಿಸಿದ್ದು, ಡಿ.ಕೆ ಶಿವಕುಮಾರ್ ಕೂಡಾ ಜಮೀರ್ ಅವರು ಮಾತನ್ನು ವಾಪಸ್ ಪಡೆಯಬೇಕು ಮತ್ತು ಕ್ಷಮೆ ಕೇಳಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.
ಈ ಬಗ್ಗೆ ಅವರಿಗೆ ಕಾರಣ ಕೇಳಿ ನೋಟಿಸ್ ಕೊಡುತ್ತೇವೆ ಕಾಂಗ್ರೆಸ್ ಪಕ್ಷವೂ ಅವರ ಈ ಹೇಳಿಕೆಯನ್ನು ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ.