ಬೆಂಗಳೂರು, ಫೆ.14 (DaijiworldNews/HR): ಹಿಜಾಬ್ ವಿವಾದ ಕುರಿತ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ನಾಳೆಗೆ ಮುಂದೂಡಿಕೆ ಮಾಡಿದೆ ಎಂದು ತಿಳಿದು ಬಂದಿದೆ.
ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ಜೈಬುನ್ನಿಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಂದು ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ಆರಂಭಿಸಿದ್ದು, ಹಿಜಾಬ್ ಕುರಿತ ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ ಕಾಮತ್ ಅವರ ವಾದ ಆಲಿಸಿ ಬಳಿಕ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಇನ್ನು ಇಂದು ಸತತ ಎರಡು ಗಂಟೆಗಳ ಕಾಲ ಅರ್ಜಿ ವಿಚಾರಣೆಯನ್ನು ಆಲಿಸಿರುವ ನ್ಯಾಯಪೀಠ ಮುಂದಿನ ವಿಚಾರಣೆಯಲ್ಲಿ ಮಂಗಳವಾರ(ನಾಳೆ) ಮಧ್ಯಾಹ್ನ 2:30ಕ್ಕೆ ಮುಂದೂಡಿದೆ ಎನ್ನಲಾಗಿದೆ.