ಬೆಂಗಳೂರು, ಫೆ. 14(DaijiworldNews/SM): ರಾಜ್ಯದಲ್ಲಿ ಫೆ. 16ರಿಂದ ಕಾಲೇಜುಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಫೆಬ್ರವರಿ 16ರ ಬುಧವಾರದಿಂದ ಕಾಲೇಜುಗಳು ಆರಂಭಗೊಳ್ಳಲಿವೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಪಿಯು, ಡಿಗ್ರಿ ಕಾಲೇಜುಗಳು ಪುನರಾರಂಭಗೊಳ್ಳಲಿದೆ. ಹೈಕೋರ್ಟ್ ಆದೇಶ ಪಾಲಿಸಿ ಕಾಲೇಜುಗಳು ಆರಂಭಗೊಳ್ಳಲಿದೆ. ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯ ಎಂದು ಸ್ಪಷ್ಟಪಡಿಸಲಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.