ಬೆಂಗಳೂರು, ಫೆ 15 (DaijiworldNews/MS): ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ಅವರು ಫೆಬ್ರವರಿ 14ರಂದು ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. 84 ವರ್ಷದ ಭಾರ್ಗವಿ ಅವರು ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು.
ರಂಗಭೂಮಿ, ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದ ಭಾರ್ಗವಿ ಅವರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ತೀವ್ರ ನೋವು ತಂದಿದೆ. ಅವರ ಸಾವಿಗೆ ಸ್ಯಾಂಡಲ್ವುಡ್ನ ಸಾಕಷ್ಟು ಮಂದಿ ಸಂತಾಪ ಸೂಚಿಸುತ್ತಿದ್ದಾರೆ.
2019ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದ ಭಾರ್ಗವಿ ಅವರು, ಎರಡು ಕನಸು, ಹಂತಕರ ಸಂಚು, ಪಲ್ಲವಿ ಅನುಪಲ್ಲವಿ, ವಂಶವೃಕ್ಷ ಸೇರಿದಂತೆ ಹಲವು ಚಿತ್ರಗಳಿಗೆ ಬಣ್ಣ ಹಚ್ಚಿದ್ದಾರೆ.
ಭಾರ್ಗವಿ ನಾರಾಯಣ್ ಅವರು ನಂಜುಡಯ್ಯ ನಾರಾಯಣ (ಮೇಕಪ್ ನಾಣಿ) ಅವರನ್ನು ವಿವಾಹವಾಗಿದ್ದು ದಂಪತಿಗೆ ನಟರಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ ಸೇರಿ ನಾಲ್ಕು ಮಕ್ಕಳಿದ್ದಾರೆ.