ಬೆಂಗಳೂರು, ಫೆ 15 (DaijiworldNews/HR): ಹಿಜಾಬ್ ವಿವಾದವನ್ನು ವಿದ್ಯಾರ್ಥಿನಿಯರ ಮೂಲಕ ಆಡಿಸುತ್ತಿರುವ ಕೀಲಿಕೈ ಬೇರೆಯೇ ಇದೆ. ಕಾಂಗ್ರೆಸ್ ಈ ವ್ಯೂಹದ ಮೆದುಳು. ಎಸ್ಡಿಪಿಐ ಅದರ ದೇಹ. ಇದು ಕೇವಲ ವಿವಾದವಲ್ಲ, ಮೂಲಭೂತವಾದವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ವ್ಯವಸ್ಥಿತ ಸಂಚು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹಿಜಾಬ್ ವಿವಾದವನ್ನು ವಿದ್ಯಾರ್ಥಿನಿಯರ ಮೂಲಕ ಆಡಿಸುತ್ತಿರುವ ಕೀಲಿಕೈ ಬೇರೆಯೇ ಇದ್ದು,ಇದು ಕೇವಲ ವಿವಾದವಲ್ಲ, ಮೂಲಭೂತವಾದವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ವ್ಯವಸ್ಥಿತ ಸಂಚು ಎಂದು ಆರೋಪಿದ್ದಾರೆ.
ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದ ವಿಚಾರಣೆಯನ್ನು ಫೆಭ್ರವರಿ 28 ರ ವರೆಗೆ ಮುಂದೂಡುವಂತೆ ವಿದ್ಯಾರ್ಥಿಗಳ ಪರ ವಕೀಲರು ಈಗ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಹಿಂದಿರುವ ಶಕ್ತಿಗಳು ಯಾರು? ಹಿಜಾಬ್ಗೂ ಪಂಚರಾಜ್ಯಗಳ ಚುನಾವಣೆಗೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ.