ರಾಂಚಿ, ಫೆ 15 (DaijiworldNews/HR): ಬಿಹಾರ ಮಾಜಿ ಸಿಎಂ, ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಮೇವು ಹಗರಣಕ್ಕೆ ಸಂಬಂಧಪಟ್ಟಂತೆಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಸಿಬಿಐ ವಿಶೇಷ ನ್ಯಾಯಾಲಯ ಲಾಲು ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು ನೀಡಿದೆ.
ಲಾಲು ಪ್ರಸಾದ್ ಯಾದವ್ ಸೇರಿದಂತೆ 75 ಆರೋಪಿಗಳು ಮೇವು ಹಗರಣದಲ್ಲಿ ಅಪರಾಧಿಗಳಾಗಿದ್ದು, 25 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ರಾಂಚಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 4 ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಅಪರಾಧಿ ಎಂದು ತೀರ್ಪು ನೀಡಿದ್ದು, ಇದೀಗ 5ನೇ ಪ್ರಕರಣದಲ್ಲಿಯೂ ಲಾಲು ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು ನೀಡಿದೆ.