ಬೆಂಗಳೂರು, ಫೆ 15 (DaijiworldNews/HR): ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಆರಂಭಗೊಂಡಿದೆ.
ಹಿಜಾಬ್ ಕುರಿತ ಅರ್ಜಿ ವಿಚಾರಣೆನಯನ್ನು ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಆರಂಭಿಸಲಾಗಿದೆ.
ಇನ್ನು ಇದುವರೆಗೂ ಹಿಜಾಬ್ ಕುರಿತಾಗಿ ಹೈಕೋರ್ಟ್ ನಲ್ಲಿ ಒಟ್ಟು 9 ಅರ್ಜಿಗಳು ಸಲ್ಲಿಕೆಯಾಗಿದ್ದು, ಎಲ್ಲಾ ಅರ್ಜಿಗಳ ವಿಚಾರಣೆ ಬಳಿಕ ತೀರ್ಪು ಹೊರಬೀಳಲಿದೆ.
ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ ಕಾಮತ್ ವಾದ ಮಂಡಿಸುತ್ತಿದ್ದು, ಸರ್ಕಾರದ ಪರ ಎಜಿ ಪ್ರಭುಲಿಂಗ ನಾವದಗಿ ಪ್ರತಿವಾದ ಮಂಡಿಸಲಿದ್ದಾರೆ.