ಬೆಂಗಳೂರು, ಫೆ 15 (DaijiworldNews/HR): ಆನ್ ಲೈನ್ ಗೇಮಿಂಗ್ ಅನ್ನು ಉತ್ತಮ ಉದ್ದೇಶದಿಂದ ನಾವು ನಿಷೇಧಿಸಿದ್ದೆವು. ಆದರೆ ಈಗ ಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಮತ್ತೆ ಚರ್ಚಿಸಿ ಕ್ರಮಬದ್ಧವಾಗಿ ಕಾಯ್ದೆ ತರುತ್ತೇವೆ ಎಂದು ಗೃಹ ಸಚಿವ ಅರಗ ಜ್ಙಾನೇಂದ್ರ ಹೇಳಿದ್ದಾರೆ.
ಈ ಕುರಿತು ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ನೀಡಿದ ಆದೇಶದ ಪ್ರತಿ ತರಿಸಿ ಪರಿಶೀಲನೆ ಮಾಡುತ್ತೇವೆ. ಕೋರ್ಟ್ ಯಾವುದರ ಬಗ್ಗೆ ಹೇಳಿದೆ, ಯಾವ ಕಲಂ ತೆಗೆಯಬಹುದು ಎಂದು ನೋಡುತ್ತೇವೆ. ಮತ್ತೆ ಕಾಯ್ದೆ ಜಾರಿಗೊಳಿಸುತ್ತೇವೆ ಎಂದರು.
ಇನ್ನು ಹೈಕೋರ್ಟ್ ನೀಡಿರುವ ಆದೇಶವನ್ನು ನಾವು ಒಪ್ಪುತ್ತೇವೆ. ಆದರೆ ಆನ್ ಲೈನ್ ಗೇಮ್ ಗೆ ಸಂಪೂರ್ಣವಾಗಿ ಅವಕಾಶ ಕೊಟ್ಟಿಲ್ಲ. ಹಣವಿಟ್ಟು ಆಡಲು ಅವಕಾಶ ನೀಡಿಲ್ಲ. ಎಲ್ಲಾ ಸಾಧ್ಯತೆಗಳ ಬಗ್ಗೆ ಮತ್ತೊಮ್ಮೆ ಕೂತು ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.