ಬೆಂಗಳೂರು, ಫೆ 15 (DaijiworldNews/HR): ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಮುಂದಿನ ವರ್ಷದಿಂದ ಸಮವಸ್ತ್ರ ಗೊಂದಲವಾಗದಂತೆ ಕಾನೂನು ರಚನೆ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಮಕ್ಕಳು ಹೈಕೋರ್ಟ್ ಆದೇಶವನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ, ಹಿಜಾಬ್, ಕೇಸರಿ ಶಾಲು ಧರಿಸಿ ಬರಬಾರದು ಎಂದು ಮನವಿ ಮಾಡಿದರು.
ಇನ್ನು ಕರ್ನಾಟಕದಲ್ಲಿ ಹಿಜಾಬ್ ಕುರಿತಂತೆ ಹೈಕೋರ್ಟ್ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಕೋರ್ಟ್ ತೀರ್ಪನ್ನು ಆಧರಿಸಿ, ಮುಂದಿನ ಶೈಕ್ಷಣಿಕ ವರ್ಷದಿಂದ ವಿಶೇಷ ಕಾನೂನು ಜಾರಿಗೆ ತರಲಾಗುತ್ತದೆ. ಇದಕ್ಕಾಗಿ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.