ಪಣಜಿ, ಫೆ 15 (DaijiworldNews/MS): ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಣಜಿಯಲ್ಲಿ ಮಾಧ್ಯಮಗಳಿಗೆ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ ಅವರು, ಆಡಳಿತ ಪಕ್ಷ ಬಿಜೆಪಿಗೆ ಗೋವಾ ಜನತೆ ತಕ್ಕ ಪಾಠ ಕಲಿಸಲಿದ್ದು, ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಮತದಾನವಾಗಿದೆ ಎಂದು ಹೇಳಿದ್ದಾರೆ.
ಗೋವಾದ ಜನತೆಗೆ ಸ್ಥಿರ ಸರ್ಕಾರ ಬೇಕು ಮತ್ತು ಸ್ಪಷ್ಟ ಜನಾದೇಶ ಸಿಗಬೇಕು. ಸಿಎಂ ಪ್ರಮೋದ ಸಾವಂತ್ ರವರ ಮೇಲೆ ಜನ ಸಿಟ್ಟಿಗೆದ್ದಿದ್ದರಿಂದ ಅವರ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಿದೆ. ಸೋಲು ಕಟ್ಟಿಟ್ಟ ಬುತ್ತಿ ಎಂದು ಸಾವಂತ್ ಅವರು ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದ್ದರು. ಎನೇ ಅದರೂ ನಮ್ಮ ಕಾಂಗ್ರೇಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಹೇಳಿದರು.