ಬೆಂಗಳೂರು, ಫೆ 14 (DaijiworldNews/KP): ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ಸಿಬ್ಬಂದಿಗೂ ಅನ್ವಯ ಮಾಡುತ್ತಿದ್ದಾರೆ, ಇದರಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್ ಹೇಳಿದರು.
ವಿಧಾನ ಸಭಾ ಕಲಾಪದಲ್ಲಿ ಶೂನ್ಯ ವೇಳೆಯಲ್ಲಿ ಹಿಜಾಬ್ ವಿಚಾರ ಪ್ರಸ್ತಾಪಿಸಿದ ಅವರು, ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ಕೆಲ ಶಾಲೆಗಳಲ್ಲಿ ಸಿಬ್ಬಂದಿಗೂ ಅನ್ವಯ ಮಾಡುತ್ತಿದ್ದಾರೆ, ಇದರಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ಫ್ರೌಢ ಶಾಲೆ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿದರು.
ಸದನದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಪಸ್ಥಿತಿ ಹಿನ್ನೆಲೆಯಲ್ಲಿ ಉತ್ತರ ನೀಡಿದ ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ, ಹೈಕೋರ್ಟ್ ಆದೇಶವನ್ನು ಶಾಲೆಯ ಎಲ್ಲರೂ ಪಾಲಿಸಬೇಕು ಎಂದು ಹೇಳಿದ್ದಾರೆ.
ಈ ವೇಳೆ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಸೃಷ್ಟಿಯಾಗಿರುವುದರ ಬಗ್ಗೆ ಚರ್ಚೆಗೆ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರೂ ಸ್ಪೀಕರ್ ಕಾಗೇರಿ ನಿರಾಕರಿಸಿದರು.