ಬೆಂಗಳೂರು, ಫೆ. 15 (DaijiworldNews/SM): ಹಿಜಾಬ್ ವಿವಾದ ಸದ್ಯ ವಿಚಾರಣೆ ಹಂತದಲ್ಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ಜಾರಿಗೆ ತರಲು ರಾಜ್ಯ ಸರಕಾರ ಬದ್ಧ ಎಂದು ಸಚಿವ ಜೆಸಿ ಮಾಧುಸ್ವಾಮಿ ಅವರು ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ.
ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ, ನ್ಯಾಯಾಲಯದ ಆದೇಶದ "ಗೊಂದಲ ಮತ್ತು ವ್ಯಾಖ್ಯಾನ" ದ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಇನ್ನು ಖಾದರ್ ಪ್ರಸ್ತಾಪಕ್ಕೆ ಉತ್ತರಿಸಿದ ಮಾಧುಸ್ವಾಮಿ, ನ್ಯಾಯಾಲಯದ ಆದೇಶವನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ನಾನು ಭರವಸೆ ನೀಡುತ್ತೇನೆ ಎಂದು ಸರ್ಕಾರದ ಪರವಾಗಿ ಹೇಳಿದರು.