ಬೆಂಗಳೂರು, ಫೆ 16 (DaijiworldNews/KP): ಪ್ರವಾಸಕ್ಕೆಂದು ಕೋಲಾರಕ್ಕೆ ತೆರಳಿ ಬೆಂಗಳೂರಿಗೆ ಕಾರಿನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಲಾರಿಗೆ ಢಿಕ್ಕಿ ಹೊಡೆದ ತೀವ್ರತೆಗೆ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಕಾರಿನಲ್ಲಿ ಆರು ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ. ಇನ್ನು ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು. ಸಿರಿಕೃಷ್ಣ ಮತ್ತು ಅಂಕಿತಾ ರೆಡ್ಡಿ ಅವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಕೆಆರ್ ಪುರಂನ ಗಾರ್ಡನ್ ಸಿಟಿ ಕಾಲೇಜಿನ ಆರು ಜನ ವಿದ್ಯಾರ್ಥಿಗಳು ತಮಿಳುನಾಡು ನೋಂದಣಿಯ TN-77-P-4512 ಸ್ವಿಫ್ಟ್ ಕಾರಿನಲ್ಲಿ ಕೋಲಾರದ ನರಸಾಪುರ ಬಳಿಯಿರೂ ಕೆಫೆ ಕಾಫಿ ಡೇ ಗೆ ಹೋಗಿ ಬೆಂಗಳೂರು ಕಡೆಗೆ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಬೆಂಗಳೂರಿಗೆ ವಾಪಸ್ ಬರುತ್ತಿದ್ದ ವೇಳೆ ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿಯ ನಿಯಂತ್ರಣ ತಪ್ಪಿ ಮೊದಲಿಗೆ ರಸ್ತೆ ಮಧ್ಯೆಯ ಡಿವೈಡರ್ ಗೆ ಡಿಕ್ಕಿ ಹೋಡೆದು, ನಂತರ ನೂರು ಮೀಟರಿಗೂ ಅಧಿಕ ದೂರ ಹೆದ್ದಾರಿಯಲ್ಲಿ ಪಲ್ಟಿ ಹೊಡೆದು ಬೆಂಗಳೂರು ಕಡೆಯಿಂದ ಕೋಲಾರದ ಕಡೆಗೆ ಹೋಗ್ತಿದ್ದ AP-07-TH-6898 ಸಂಖ್ಯೆಯ ಲಾರಿಗೆ ಡಿಕ್ಕಿ ಹೊಡೆದು, ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹಳ್ಳಕ್ಕೆ ಬಿದ್ದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿ ಜಖಂಗೊಂಡಿದ್ದು, ಸ್ಥಳಕ್ಕೆ ಹೊಸಪೇಟೆ ಸಿಪಿಐ ಮಂಜುನಾಥ್ ಭೇಟಿ ನೀಡಿದ್ದಾರೆ, ಈ ಬಗ್ಗೆ ಹೊಸಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.