ನವದೆಹಲಿ, ಫೆ 16(DaijiworldNews/MS): ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಅವರ ನಿವಾಸಕ್ಕೆ ನುಗ್ಗಲು ಯತ್ನಿಸಿದ ಅಪರಿಚಿತ ವ್ಯಕ್ತಿಯನ್ನು ಬಂಧಿಸಲಾಗಿದೆ.
ಬುಧವಾರ ಬೆಳಗ್ಗೆ ದೆಹಲಿಯಲ್ಲಿರುವ ಎನ್ಎಸ್ಎ ಸಲಹೆಗಾರ ದೋವಲ್ ಅವರ ನಿವಾಸಕ್ಕೆ ಕಾರಿನಲ್ಲಿ ಪ್ರವೇಶಿಸಲು ಯತ್ನಿಸಿದಾಗ ವ್ಯಕ್ತಿಯನ್ನು ತಡೆದು ಬಂಧಿಸಲಾಗಿದೆ.
ವ್ಯಕ್ತಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ