ಬೆಂಗಳೂರು, ಫೆ 16(DaijiworldNews/MS): ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ಪೂರ್ಣ ಪೀಠವು ಮುಂದುವರಿಸಿದೆ.
ಫೆ 16ರ ಬುಧವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಆರಂಭಿಸಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ರವಿವರ್ಮ ಕುಮಾರ್ ಅವರು ವಾದ ಮಂಡನೆ ಮಾಡಿ ನವತೇಜ್ ಸಿಂಗ್ ಪ್ರಕರಣ ಉಲ್ಲೇಖಿಸಿ, ಭಾರತದಲ್ಲಿ ವೈವಿದ್ಯತೆಯಲ್ಲಿ ಏಕತೆ ಇರುವುದನ್ನು ಪರಿಗಣಿಸಬೇಕು. ಶಿಕ್ಷಣದ ಹಕ್ಕಿನ ಕಾಯ್ದೆಯನ್ನೂ ಪ್ರಶ್ನಿಸಲಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರ ಸಂಖ್ಯೆಯೇ ಕಡಿಮೆಯಿದೆ. ಸರ್ಕಾರದ ಇಂತಹ ಆದೇಶಗಳಿಂದ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಹಿನ್ನಡೆಯಾಗಿದೆ. ಸರ್ಕಾರದ ಆದೇಶ ರದ್ದುಪಡಿಸಲು ಮನವಿ ಮಾಡಿ ರವಿವರ್ಮಕುಮಾರ್ ವಾದಮಂಡನೆ ಮುಕ್ತಾಯಗೊಳಿಸಿದ್ದಾರೆ.
ಹಿರಿಯ ವಕೀಲ ಯೂಸುಫು ಮುಕ್ಕಲಾ ವಾದಮಂಡನೆ ಆರಂಭಿಸಿದ್ದಾರೆ. ಬಾಂಬೆಯ ಹಿರಿಯ ವಕೀಲ ಯೂಸುಫ್ ಮುಕ್ಕಲಾ ಹೈಕೋರ್ಟ್ನಲ್ಲಿ ವಾದವನ್ನು ಆರಂಭಿಸಿದ್ದಾರೆ. ಆರಂಭದಲ್ಲಿಯೇ ಹಿಜಾಬ್ ನಿರ್ಬಂಧ ನಿರಂಕುಶ ಆದೇಶವಾಗಿದೆ ಎಂದಿದ್ದಾರೆ. ತ್ರಿವಳಿ ತಲಾಖ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ, ಸರ್ಕಾರದ ಆದೇಶ ನಿರಂಕುಶವೆಂದು ಎಂದು ವಾದಿಸಿದ್ದಾರೆ.