ಉತ್ತರಪ್ರದೇಶ, ಫೆ 17 (DaijiworldNews/KP): ಉತ್ತರ ಪ್ರದೇಶದ ಕುಶಿನಗರದ ನೆಬು ನೌರಂಗಿಯಾ ಎಂಬಲ್ಲಿ ಮದುವೆ ಸಂಭ್ರಮ ವೇಳೆ ಹಳೆಯ ಬಾವಿಗೆ ಮುಚ್ಚಿದ್ದ ಚಪ್ಪಡಿ ಆಕಸ್ಮಿಕವಾಗಿ ಕುಸಿದು ಬಾವಿಗೆ ಬಿದ್ದು ಮೃತಪಟ್ಟವರ ಸಂಖ್ಯೆ 13ಕ್ಕೆರಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ದುರಂತ ಬುಧವಾರ ತಡರಾತ್ರಿ ನಡೆದಿದ್ದು, ಆರಂಭದಲ್ಲಿ 11 ಮಂದಿ ಮೃತಪಟ್ಟಿದ್ದರು, ಆದರೆ ಇದೀಗ ಇನ್ನಿಬ್ಬರು ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಮದುವೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಮತ್ತು ಮಕ್ಕಳು ಹಳೆಯ ಬಾವಿಗೆ ಮುಚ್ಚಿದ್ದ ಚಪ್ಪಡಿಯ ಮೇಲೆ ಕುಳಿತಿದ್ದರು, ಈ ವೇಳೆ ಹೆಚ್ಚು ಭಾರದಿಂದಾಗಿ ಚಪ್ಪಡಿ ಕುಸಿದು, ಅದರ ಮೇಲೆ ಕುಳಿತಿದ್ದವರೆಲ್ಲ ಬಾವಿಗೆ ಬಿದಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಡೆದ ಕೂಡಲೆ ಎಲ್ಲರನ್ನು ಬಾವಿಯಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಆಸ್ಪತ್ರೆಗೆ ತಲುಪುವ ಮೊದಲೆ 11 ಮಂದಿ ಉಸಿರಿ ನಿಲ್ಲಿಸಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು.
ಮದುವೆ ಸಂಭ್ರಮದಲ್ಲಿ ವೇಳೆ ಹಳೆಯ ಬಾವಿಗೆ ಮುಚ್ಚಿದ್ದ ಚಪ್ಪಡಿ ಆಕಸ್ಮಿಕವಾಗಿ ಬಾವಿಗೆ ಬಿದ್ದು 11 ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಬಗ್ಗೆ ನಾವು ಮಾಹಿತಿ ಲಭ್ಯವಾಗಿದೆ, ಇನ್ನು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಎಸ್. ರಾಜಲಿಂಗಂ ತಿಳಿಸಿದರು.
ಇನ್ನು ಈ ಘಟನೆಯ ಕುರಿತು ಮಾತನಾಡಿದ ಗೋರಖ್ಪುರ ವಲಯದ ಎಡಿಜಿ ಅಖಿಲ್ ಕುಮಾರ್, ನಿನ್ನೆ ರಾತ್ರಿ 8.30ರ ಸುಮಾರಿಗೆ ಕುಶಿನಗರದ ನೆಬು ನೌರಂಗಿಯಾ ಪ್ರದೇಶದಲ್ಲಿ ಈ ಘಟಬೆ ನಡೆದಿದೆ. ಅಲ್ಲದೆ ಸಾವಿನ ಸಂಖ್ಯೆ 13ಕ್ಕೇಯಾಗಿದೆ ಎಂದು ಹೇಳಿದರು.
ಇನ್ನು ಘಟನೆಯ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಅಲ್ಲದೆ ಈ ಕೂಡಲೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಯೋಗಿ ಅವರು ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.
ಇದೀಗ ಪ್ರಧಾನಿ ಮೋದಿ ಅವರು ಕೂಡ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ ಗಾಯಗೊಂಡವರ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪಾರ್ಥನೆ ಸಲ್ಲಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ
ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದ್ದು, ಇನ್ನು ತಮ್ಮ ಸಂಬಂಧಿಕರು ಹಾಗೂ ಕುಟುಂಬದ ಸದಸ್ಯರನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೆ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದೆ.