ಬೆಂಗಳೂರು, ಫೆ 17 (DaijiworldNews/KP): ಕರ್ನಾಟಕ ಹಾಗೂ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕದ ಗಡಿ ಹಂಚಿಕೊಂಡಿರುವ ರಾಜ್ಯಗಳಿಂದ ಬರುವ ಜನರು ಆರ್ಟಿಪಿಸಿಅರ್ ಪ್ರಮಾಣ ಪತ್ರವನ್ನು ಹೊಂದಿರಬೇಕಾಗಿಲ್ಲ ಎಂದು ಗುರುವಾರ ರಾಜ್ಯ ಸರ್ಕಾರ ಹೇಳಿದೆ.
ಇನ್ನು ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ, ಕರ್ನಾಟಕಕ್ಕೆ ಹೊಂದಿಕೊಂಡಿರುವ ಗೋವಾ ಮತ್ತು ಕೇರಳದಿಂದ ಬರುವ ಜನರಿಗೆ ಆರ್ಟಿಪಿಸಿಅರ್ ಪರೀಕ್ಷಾ ವರದಿ ಕಡ್ಡಾಯವಾಗಿ ಹೊಂದಿರಬೇಕೆಂದಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ಮುಂದೆ ವಿಮಾನ, ರೈಲು, ರಸ್ತೆ ಅಥವಾ ಸಾರ್ವಜನಿಕ ಅಥವಾ ವೈಯಕ್ತಿಕ ವಾಹನ ಮೂಲಕ ರಾಜ್ಯಗಳಿಗೆ ಪ್ರಯಾಣಿಸುವ ಕೇರಳ ಮತ್ತು ಗೋವಾ ರಾಜ್ಯದ ಜನರು ಆರ್ಟಿಪಿಸಿಅರ್ ಪರೀಕ್ಷಾ ವರದಿಯನ್ನು ನೀಡಬೇಕಾಗಿಲ್ಲ
ಆದರೆ ಈ ಎರಡು ರಾಜ್ಯಗಳಿಂದ ಆಗಮಿಸುವವರು ಎರಡು ಡೋಸ್ ಕೊರೊನಾ ಲಸಿಕ ಪ್ರಮಾಣ ಪತ್ರವನ್ನು ಹೊಂದಿರಬೇಕು ಎಂದು ತಿಳಿಸಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿರುವ ಹಿನ್ನಲೆಯಲ್ಲಿ ನಿಯಮಗಳನ್ನು ಸಡಿಲಿಕೆ ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ತಿಳಿಸಿದ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಸಾರ್ವಜನಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತದ ಮೂಲಕ ತಿಳಿಸಿದರು.
ಇನ್ನು ಕೆಲವೊಂದು ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗದ ಹಿನ್ನಲೆಯಲ್ಲಿ ಕೆಲವು ರಾಜ್ಯಗಳು ಕೊರೊನಾ ನಿರ್ಬಂಧವನ್ನು ಮುಂದುವರೆಸಲಾಗುವುದು ಎಂದು ಹೇಳಿದರು.