ಬೆಂಗಳೂರು, ಫೆ 18 (DaijiworldNews/HR): ಸದನದಲ್ಲಿ ಆಡಳಿತ, ವಿಪಕ್ಷಗಳ ಗಲಾಟೆ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.
ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಪರಿಷತ್ ಬಾವಿಗಿಳಿದು ಇಂದು ಕೂಡ ಧರಣಿ ನಡೆಸಿದ್ದಾರೆ.
ಸಚಿವ ಈಶ್ವರಪ್ಪ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕೆಲ ಬಿಜೆಪಿ ಸದಸ್ಯರು ಸದನದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.
ಇನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ ಆರಂಭವಾಗುತ್ತಿದ್ದಂತೆ ವಿಧಾನಪರಿಷತ್ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ.