ನವದೆಹಲಿ, ಫೆ 19 (DaijiworldNews/KP): ಪಾಕಿಸ್ತಾನದ ಉಗ್ರ ಸಂಘಟನೆ ಲಷ್ಕರ್ ಇ- ತೊಯ್ಬಾ ಸಂಘಟನೆಯ ಉಗ್ರರಿಗೆ ರಹಸ್ಯ ದಾಖಲೆಗಳ ಸೋರಿಕೆ ಆರೋಪದ ಮೇರೆಗೆ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಐಪಿಎಸ್ ಅಧಿಕಾರಿ ಅರವಿಂದ್ ದಿಗ್ವಿಜಯ್ ನೇಗಿ ಅವರನ್ನು ಶುಕ್ರವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ.
2011ರಲ್ಲಿ ಐಪಿಎಸ್ ಆಗಿ ಮುಂಬಡ್ತಿ ಪಡೆದಿದ್ದ ನೇಗಿ ಅವರನ್ನು ಕಳೆದ ವರ್ಷ ನವೆಂಬರ್ 6 ರಂದು ಎನ್ ಐಎ ದಾಖಲಿಸಿದ್ದ ಪ್ರಕರಣವೊಂದರಲ್ಲಿ ಬಂಧಿಸಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
ಇನ್ನು ಈ ಹಿಂದೆ ನೇಗಿಯವರು ಎನ್ಐಎ ತನಿಖಾಧಿಕಾರಿಯಾಗಿದ್ದಾಗ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಷೇಧಿತ ಲಷ್ಕರ್-ಇ-ತೊಯ್ಬಾದ ಉಗ್ರ ಸಂಘಟನೆಗೆ ಕೆಲವು ರಹಸ್ಯ ಮಾಹಿತಿಗಳನ್ನು ನೀಡಿರುವುದಕ್ಕೆ ಸಂಬಂಧಿಸಿದ ಕೇಸ್ ಇದಾಗಿದ್ದು, ಈ ಹಿಂದೆ ಎನ್ಐಎ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿತ್ತು.
ಇನ್ನು ತನಿಖೆಯ ಸಮಯದಲ್ಲಿ, ಶಿಮ್ಲಾದಲ್ಲಿ ನಿಯೋಜಿಸಲಾದ ಎಡಿ ನೇಗಿ, ಐಪಿಎಸ್, ಎಸ್ಪಿ ಪಾತ್ರವನ್ನು ಪರಿಶೀಲಿಸಲಾಗಿತ್ತು. ಅಲ್ಲದೇ ಅವರ ಮನೆಗಳನ್ನು ಶೋಧಿಸುವಾಗ ಎಲ್ ಇಟಿ ಕೇಸ್ ಗೆ ಸಂಬಂಧಿಸಿದ ಇನ್ನೊಬ್ಬ ಆರೋಪಿಗೆ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿರುವುದು ಕಂಡುಬಂದಿತ್ತು ಎಂದು ವಕ್ತಾರರು ತಿಳಿಸಿದ್ದಾರೆ.
ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಯೋಜಿಸಲು ನಿಷೇಧಿತ ಲಸ್ಕರ್-ಎ-ತೊಯ್ಬಾದ ಉಗ್ರ ಸಂಘಟನೆಯ ಜಾಲವನ್ನು ವಿಸ್ತರಿಸುವುದಕ್ಕೆ ಸಂಬಂಧಿಸಿದ ಕೇಸ್ ಇದಾಗಿದೆ. ಈ ಪ್ರಕರಣದಲ್ಲಿ ಎನ್ಐಎ ಈ ಹಿಂದೆ ಆರು ಮಂದಿಯನ್ನು ಬಂಧಿಸಿತ್ತು.