ಬಿಹಾರ, ಫೆ 19 (DaijiworldNews/KP): ನಿಂತಿದ್ದ ರೇಲಿನ ಬೋಗಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಶನಿವಾರ ಬೆಳಗ್ಗೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ನಡೆದಿದೆ.
ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ನಿಂತಿದ್ದ ಖಾಲಿ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಸ್ಥಳಾಕ್ಕಾಗಮಿಸಿದ ಮಧುಬನಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ರೈಲು ನಿಲ್ದಾಣದಲ್ಲಿ ಸದ್ಯ ಅತಂಕದ ವಾತಾವರಣ ಸೃಷ್ಟಿಯಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬಿಂಕಿ ಹತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಸದ್ಯ ಸಾವು-ನೋವುಗಳ ಬಗ್ಗೆ ಖಚಿತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ, ಅಲ್ಲದೆ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.