ನವದೆಹಲಿ, ಫೆ 19 (DaijiworldNews/HR): ಉಕ್ರೇನ್ನಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ಭಾರತೀಯರ ನೆರವಿಗಾಗಿ ಮೂರು ಏರ್ ಇಂಡಿಯಾ ವಿಮಾನಗಳನ್ನು ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಮುಂದಿನ ವಾರ ಫೆಬ್ರವರಿ 22, 24 ಮತ್ತು 26 ರಂದು ಭಾರತ ಮತ್ತು ಉಕ್ರೇನ್ ನಡುವೆ ಏರ್ ಇಂಡಿಯಾದ ಮೂರು ವಿಮಾನಗಳು ಹಾರಾಟ ನಡೆಸಲಿವೆ.
ಇನ್ನು ಬೋರಿಸ್ಪಿಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳು ಟೇಕ್ ಆಫ್ ಆಗಲಿದ್ದು, ಏರ್ ಇಂಡಿಯಾ ಬುಕಿಂಗ್ ಕಚೇರಿಗಳು, ವೆಬ್ಸೈಟ್, ಕಾಲ್ ಸೆಂಟರ್ ಮತ್ತು ಅಧಿಕೃತ ಟ್ರಾವೆಲ್ ಏಜೆಂಟ್ಗಳ ಮೂಲಕ ಬುಕಿಂಗ್ ಆರಂಭವಾಗಿದೆ ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ.
ಇದಕ್ಕೂ ಮೊದಲು ಉಳಿಯಲು ಅನಿವಾರ್ಯವಲ್ಲದ ನಾಗರಿಕರು, ವಿಶೇಷವಾಗಿ ವಿದ್ಯಾರ್ಥಿಗಳಿಗೆ ತಾತ್ಕಾಲಿಕವಾಗಿ ಕೈವ್ನಿಂದ ಹೊರಹೋಗುವಂತೆ ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕೇಳಿಕೊಂಡಿತು.