ಬೆಂಗಳೂರು, ಫೆ 19 (DaijiworldNews/HR): ಕೊರೊನಾ ಕಾರಣದಿಂದಾಗಿ ಸ್ಥಗಿತಗೊಂಡಿದ್ದಂತ ಮೇಕೆದಾಟು ಪಾದಯಾತ್ರೆ 2ನೇ ಹಂತದಲ್ಲಿ ಫೆಬ್ರವರಿ 27ರಿಂದ ಪುನರಾರಂಭಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಘೋಷಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರವರಿ 27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭಿಸುತ್ತಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.
ಇನ್ನು ನಾವು ರಾಜ್ಯ ಹಾಗೂ ರಾಷ್ಟ್ರದ ಹಿತಕ್ಕಾಗಿ ಹೋರಾಟ ಮಾಡುತ್ತಿದ್ದು, ಬೆಂಗಳೂರು ಜನರ ಕುಡಿಯುವ ನೀರಿಗೆ, ರೈತರ ಹಿತಕ್ಕೆ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ.
ಬಿಜೆಪಿಯವರಿಗೆ ರಾಜ್ಯದ ನೀರಾವರಿ ವಿಚಾರವಾಗಿ ಆಸಕ್ತಿ ಇಲ್ಲ. ಅವರಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದರೂ ಅವರು ಯಾವಾಗ ಬೇಕಾದರೂ ಕೆಲಸ ಆರಂಭಿಸಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.