ಜಮ್ಮು-ಕಾಶ್ಮೀರ, ಫೆ 19 (DaijiworldNews/HR): ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಭಯೋತ್ಪಾದಕನನ್ನು ಹತ್ಯೆಗೈದಿದ್ದು, ಇಬ್ಬರು ಸೇನಾ ಯೋಧರು ಹುತಾತ್ಮರಾಗಿರುವ ಘಟನೆ ಶೋಪಿಯಾನ್ ಜಿಲ್ಲೆಯ ಝೈನಪೋರಾ ಪ್ರದೇಶದ ಚೆರ್ಮಾರ್ಗ್ ನಲ್ಲಿ ನಡೆದಿದೆ.
ಶೋಪಿಯಾನ್ ನ ಝೈನಪೋರಾ ಪ್ರದೇಶದ ಚೆರ್ಮಾರ್ಗ್ ನಲ್ಲಿ ಎನ್ ಕೌಂಟರ್ ನಡೆಯುತ್ತಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ಕೆಲಸಮಾಡುತ್ತಿವೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದರು.
ಇನ್ನು ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರೆದಿದ್ದು, ಭಯೋತ್ಪಾದಕರ ಇರುವಿಕೆಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.