ಕೋಲಾರ, ಫೆ 19 (DaijiworldNews/HR): 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ, ದುರುಳರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ತಾಲ್ಲೂಕಿನಲ್ಲಿ ನಡೆದಿದೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಆನಂದ ಕುಮಾರ್ (25), ಕಾಂತರಾಜ್ (23), ಪ್ರವೀಣ್ (21), ವೇಣು (19) ಎಂದು ಗುರುತಿಸಲಾಗಿದೆ.
ಬಾಲಕಿಯನ್ನ ಪುಸಲಾಯಿಸಿ ಬೇರೆ ಕಡೆಗೆ ಕರೆದುಕೊಂಡ ಹೋದ ಯುವಕರು ಸಾಮೂಹಿಕ ಅತ್ಯಾಚಾರ ವೆಸಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸದ್ಯ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ.