ಹುಬ್ಬಳ್ಳಿ, ಫೆ 19 (DaijiworldNews/HR): ಬಿಜೆಪಿ ಸೇರುವ ಕುರಿತು ನಾನು ಈವರೆಗೂ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಎರಡು ಹೆಸರು ಹೈಕಮಾಂಡ್'ಗೆ ಹೋಗಿದ್ದು, ಅದರಲ್ಲಿ ನನ್ನ ಹೆಸರು ಇದ್ದರೂ ಇರಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಅವರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ಇನ್ನು ಸಚಿವ ಈಶ್ವರಪ್ಪ ರಾಜೀನಾಮೆ ನೀಡಲ್ಲ ಅಂತಾರೆ, ಕಾಂಗ್ರೆಸ್ ರಾಜೀನಾಮೆ ಪಡೆಯದೇ ಬಿಡಲ್ಲ ಅನ್ನುತ್ತಿದೆ. ಸದನದಲ್ಲಿ ನಡೆಯುತ್ತಿರುವ ಬಿಜೆಪಿ, ಕಾಂಗ್ರೆಸ್ ಗದ್ದಲ, ಗಂಡ-ಹೆಂಡತಿ ನಡುವೆ ಕೂಸು ಬಡವಾದ ಹಾಗಾಗಿದೆ. ರಾಜ್ಯದ ಜನತೆಗೆ ನಾವು ಅನ್ಯಾಯ ಮಾಡುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನು ಸಭಾಪತಿಯಾಗಿ ಮಾತನಾಡುತ್ತಿಲ್ಲ. ಸಾಮಾನ್ಯ ಪ್ರಜೆಯಾಗಿ ಮಾತನಾಡುತ್ತಿದ್ದೇನೆ. ನಾವು ಜನರಿಗೆ ಮೋಸ, ಅವಮಾನ, ಕೆಟ್ಟದ್ದು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.