ನವದೆಹಲಿ, ಫೆ 19 (DaijiworldNews/KP): 2008ರ ಅಹಮದಾಬಾದ್ ಸ್ಫೋಟದಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರೊಂದಿಗೆ ಸಮಾಜವಾದಿ ಪಕ್ಷವು ಸಂಪರ್ಕ ಹೊಂದಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಆರೋಪ ಮಾಡಿದ್ದಾರೆ.
ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2008ರ ಅಹಮದಾಬಾದ್ ಸ್ಫೋಟದಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನ ತಂದೆಯೊಬ್ಬರು ಅಖಿಲೇಶ್ ಯಾದವ್ ಜೊತೆ ನಿಂತಿರುವ ಫೋಟೋವೊಂದನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ.
ಬಾಯಲ್ಲಿ ರಾಮನಾಮ, ನಿಂತಿರುವುದು ಭಯೋತ್ಪಾದಕರ ಪರ. ಇದು ಸಮಾಜವಾದಿ ಪಕ್ಷವಲ್ಲ, ಸಮಾಜ ವಿರೋಧಿ ಪಕ್ಷ, ಅಲ್ಲದೆ ಅಧಿಕಾರದ ಆಸೆಗಾಗಿ ಅಲ್ಲಸಂಖ್ಯಾತರ ಓಲೈಕೆಯಷ್ಟೇ ಇವರ ಉದ್ದೇಶ ಎಂದು ಹೇಳಿದರು
ಇನ್ನು ಭಯೋತ್ಪಾದನೆ ಬಗ್ಗೆ ಬಿಜೆಪಿ ಯಾವಾಗಲೂ ವಿರೋಧ ವ್ಯಕ್ತಪಡಿಸುತ್ತ ಬಂದಿದೆ, ಆದರೆ ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾದವರ ಬಗ್ಗೆ ಸಮಾಜವಾದಿ ಪಕ್ಷದ ನಿಲುವೇನು?, ಅಲ್ಲದೆ ಅಹಮುದಾಬಾದ್ ಸರಣಿ ಸ್ಫೋಟದ ಹಿಂದೆ ಸಮಾಜವಾದಿ ಪಕ್ಷದ ನಾಯಕರಿಗೂ ಸಂಬಂಧವಿದೆಯೇ ಎಂದು ಪ್ರಶ್ನಿಸಿದ್ದರು.