ಪಂಜಾಬ್, ಫೆ. 19 (DaijiworldNews/SM): ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಎಫ್ ಐಆರ್ ದಾಖಲಿಸಲು ಚುನಾವಣಾ ಆಯೋಗ ಪೊಲೀಸರಿಗೆ ಆದೇಶಿಸಿದೆ.
ವೀಡಿಯೋ ಒಂದರಲ್ಲಿ "ಇತರ ಪಕ್ಷಗಳ ವಿರುದ್ಧ ಸುಳ್ಳು ಮತ್ತು ಕ್ಷುಲ್ಲಕ ಆರೋಪಗಳನ್ನು" ಮಾಡುತ್ತದೆ ಮತ್ತು ಪಂಜಾಬ್ನಲ್ಲಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಈ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಲು ಅನುಮತಿ ನೀಡಿದೆ.
"ಪಂಜಾಬ್ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಈ ನೀತಿ ಸಂಹಿತೆಯ ಪ್ರಕಾರ ಯಾವುದೇ ಪಕ್ಷವು ಅಂತರ್ಜಾಲದಲ್ಲಿ ಯಾವುದೇ ಪ್ರಚಲಿತ ಹ್ಯಾಂಡಲ್ಗಳ ನಿರ್ದಿಷ್ಟ ನಾಯಕನನ್ನು ಗುರಿಯಾಗಿಸಿಕೊಂಡು ಯಾವುದೇ ಆಕ್ಷೇಪಾರ್ಹ ವೀಡಿಯೊಗಳನ್ನು ಹಾಕುವಂತಿಲ್ಲ," ಎಂದು ಪಂಜಾಬ್ನ ಮುಖ್ಯ ಚುನಾವಣಾ ಅಧಿಕಾರಿ ಹೇಳಿದ್ದಾರೆ.
ಆದರೆ, ದೆಹಲಿ ಸಿಎಂ ಇದನ್ನು ಉಲ್ಲಂಘಿಸಿದ್ದಾರೆ ಎಂದು ಅವರ ಮೇಲೆ ಎಫ್ ಐ ಆರ್ ದಾಖಲಿಸಲು ಅನುಮತಿ ನೀಡಲಾಗಿದೆ.