ಬೆಂಗಳೂರು,ಫೆ 20 (DaijiworldNews/HR): ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಅವರ ತಂದೆ ರೇವನಾಥ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪುನೀತ್ ರಾಜಕುಮಾರ್ ಅಗಲಿಕೆ ಆಘಾತದಿಂದ ಹೊರ ಬರುವ ಮೊದಲೇ ತಂದೆಯನ್ನು ಅಶ್ವಿನಿ ಕಳೆದುಕೊಂಡಿದ್ದು, ರೇವನಾಥ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಚಿಕ್ಕಮಗಳೂರು ಮೂಲದ ರೇವನಾಥ್ ಅವರು ಅಳಿಯ ಪುನೀತ್ ಅಗಲಿಕೆ ನಂತರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.