ಬೆಂಗಳೂರು, ಫೆ 20 (DaijiworldNews/HR): ಸೋಮವಾರದಿಂದ ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆ ಆರಂಭವಾಗಲಿತ್ತು, ಹಿಜಾಬ್ ವಿವಾದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ತಿಳಿದು ಬಂದಿದೆ.
ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಪರೀಕ್ಷೆಗೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ. ಮತ್ತೊಮ್ಮೆ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. ಹಿಜಾಬ್ ವಿವಾದದಿಂದ ಗೈರಾದರೆ ವಿದ್ಯಾರ್ಥಿನಿಯರಿಗೆ ಮತ್ತೆ ಪರೀಕ್ಷೆ ಬರೆಯಲು ಅನುಮತಿ ಇಲ್ಲ ಎಂಬುದಾಗಿ ತಿಳಿದು ಬಂದಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ವೇಳಾಪಟ್ಟಿಯಂತಯೇ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.
ಇನ್ನು ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದಿಂದ ಪ್ರಾಯೋಗಿಕ ಪರೀಕ್ಷೆಗೆ ಗೈರಾದರೆ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ.