ಬೆಂಗಳೂರು, ಫೆ 20 (DaijiworldNews/HR): ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಭಾರೀ ಕಡಿಮೆಯಾಗಿದ್ದು, ಭಾನುವಾರ 1,001 ಮಂದಿಗೆ ಕೊರೊನಾ ದೃಢಪಟ್ಟಿದ್ದು, 18 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 485 ಮಂದಿಗೆ ಸೇರಿ ರಾಜ್ಯದಲ್ಲಿ ಒಟ್ಟು 1,001 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ 1.42% %ಕ್ಕೆ ಇಳಿದಿದೆ ' ಎಂದಿದ್ದಾರೆ.
ಇನ್ನು ಇಂದು ಕೊರೊನಾಗೆ ರಾಜ್ಯಾದ್ಯಾಂತ 18 ಮಂದಿ ಬಲಿಯಾಗಿದ್ದು, 1,780 ಜನ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ 12,634 ಕ್ಕೆ ತಲುಪಿದೆ.