ಬೆಂಗಳೂರು, ಫೆ 21 (DaijiworldNews/KP): ಈಶ್ವರಪ್ಪ ಒಬ್ಬ ಹುಚ್ಚ, ಆತನ ಬುದ್ದಿಗೂ, ಆತ ಮಾತನಾಡುವುದಕ್ಕೂ ಸಂಬಂಧವೇ ಇಲ್ಲ, ಯಾವಾಗಲು ಅಸಂಬದ್ಧವಾಗಿ ಮಾತನಾಡುತ್ತಾನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಡಿಕೆಶಿ ಪ್ರಚೋದನಕಾರಿ ಹೇಳಿಕೆಯ ಪ್ರೇರಣೆ ಪಡೆದ ಮುಸ್ಲಿಂ ಗೂಂಡಾಗಳು ಶಿವಮೊಗ್ಗದಲ್ಲಿ ಹಿಂದೂ ಕಾರ್ಯಾಕರ್ತನ ಕೊಲೆ ಮಾಡಿದ್ದಾರೆ ಎಂದು ಈಶ್ವರಪ್ಪ ಹೇಳಿಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಶ್ವರಪ್ಪನ ಒಬ್ಬ ಹುಚ್ಚ, ಆತನ ಬುದ್ದಿಗೂ, ಆತ ಮಾತನಾಡುವುದಕ್ಕೂ ಸಂಬಂಧವೇ ಇಲ್ಲ, ಯಾವಗಾಲೂ ಅಸಂಬದ್ಧವಾಗಿ ಮಾತನಾಡುತ್ತಾನೆ. ಅವರ ವಿರುದ್ಧ ದೇಶದ್ರೋಹದ ಕೇಸು ಹಾಕಿ ಬಿಜೆಪಿ ಸಂಪುಟದಿಂದ ವಜಾ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ದೇಶದ ಒಬ್ಬ ಯೋಗ್ಯ ನಾಗರಿಕನಾಗಿ ದೆಹಲಿಯ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಕ್ಕೆ ಬದಲಾಗಿ ಕೇಸರಿ ಧ್ವಜವನ್ನು ಹಾರಿಸಬೇಕು ಎಂದಿದ್ದಾರೆ. ಈ ಹೇಳಿಕೆಯನ್ನು ಕ್ಷಮೆಯಿಂದ ಸರ್ಮಥಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.
ಇಂತಹ ಹೇಳಿಕೆ ನೀಡಿದ್ದರು ಕೂಡ ಬಿಜೆಪಿ ಏಕೆ ಮೌನವಹಿಸಿದೆ ಎಂದು ನನಗೆ ತಿಳಿದಿಲ್ಲ ಎಂದರು.
ಇದೇ ವೇಳೆ ಬಜರಂಗದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು, ಕುವೆಂಪು ಅವರು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದಾರೆ. ಹಾಗಗಿ ರಾಜ್ಯದಲ್ಲಿ ಶಾಂತಿ ಕದಡುವುದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.
ಅಲ್ಲದೆ ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಬಗ್ಗೆ ಯಾರಿಗೂ ಲಾಭ ಪಡೆಯುವುದಕ್ಕೆ ಅವಕಾಶ ನೀಡಬಾರದು. ಶಾಂತಿ ಕಾಪಾಡುವ ನಿಟ್ಟಿನಲ್ಲಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದೆ. ಇದು ಗುಪ್ತಚರ ವ್ಯವಸ್ಥೆಯ ವೈಫಲ್ಯ ಎಂದು ಆರೋಪಿಸಿದ್ದಾರೆ.
ಈಗಾಗಲೇ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯ ನಾಯಕರಿಂದ ಮಾಹಿತಿ ಪಡೆದಿದ್ದೇನೆ. ತಕ್ಷಣ ಸೆಕ್ಷನ್ 144 ಜಾರಿಗೊಳಿಸಬೇಕು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.