ಬೆಂಗಳೂರು, 21 (DaijiworldNews/HR): ಶಿವಮೊಗ್ಗದ ಜನತೆ ಯಾವುದೇ ಉದ್ವೇಗ, ಪ್ರಚೋದನೆಗೆ ಒಳಗಾಗದೇ ಶಾಂತಿ ಕಾಪಾಡಬೇಕು. ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಹತ್ಯೆ ಬಗ್ಗೆ ತನಿಖೆ ಈಗಾಗಲೇ ಪ್ರಾರಂಭವಾಗಿದ್ದು, ಆರೋಪಿಗಳ ಸುಳಿವು ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕೊಲೆಯಾಗಿರುವುದು ಮನಸ್ಸಿಗೆ ಬೇಸರವಾಗಿದೆ. ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನ ಬಂಧಿಸಲಾಗುವುದು. ಎಲ್ಲರೂ ಶಾಂತಿ-ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನು ಶಿವಮೊಗ್ಗದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶಿವಮೊಗ್ಗ ಜನತೆಯೂ ಸಹಕರಿಸಬೇಕು. ಹರ್ಷ ಅವರ ಹತ್ಯೆ ಪ್ರಕರಣವನ್ನು ನ್ಯಾಯಸಮ್ಮತವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.